ಮೂಡುಬಿದಿರೆ: ಬಾಲಕಿಗೆ ಕಿರುಕುಳ ಪ್ರಕರಣ; ಆರೋಪಿ ಸೆರೆ

Spread the love

ಮೂಡುಬಿದಿರೆ: ಬಾಲಕಿಗೆ ಕಿರುಕುಳ ಪ್ರಕರಣ; ಆರೋಪಿ ಸೆರೆ

ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಬಂಧಿತ ಆರೋಪಿ.

ಈತ ಮಾ.8ರಂದು ಸಂಜೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ವಿದ್ಯಾಗಿರಿ ಬಳಿ, ಜನತಾ ನಗರದಲ್ಲಿ ಟ್ಯೂಶನ್ ಮುಗಿಸಿ ಸೈಕಲ್‌ ನಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದ ಎಂದು ದೂರಲಾಗಿದೆ.

ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿದ್ದು, ಈ ವೇಳೆ ಆರೋಪಿ ಪವನ್ ಕುಮಾರ್ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ವಿವಿಧ ಮೂಲಗಳಿಂದ ಈತನ ಕುರಿತು ಮಾಹಿತಿ ಸಂಗ್ರಹಿಸಿದ ಪೊಲೀಸರು ಅಲಂಗಾರು ಬಳಿ ಈತನನ್ನು ಬಂಧಿಸಿದ್ದಾರೆ.

ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿ ಅಖಿಲ್ ಅಹಮದ್, ನಾಗರಾಜ್ ಲಂಬಾಣಿ, ಮೊಹಮ್ಮದ್ ಹುಸೇನ್, ಮೊಹಮ್ಮದ್ ಇಕ್ಬಾಲ್ ಕಾರ್ಯಾಚರಣೆ ನಡೆಸಿದರು.

ಆರೋಪಿ ಪವನ್ ಕುಮಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments