ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ
ಕುಂದಾಪುರ : ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ 2016-17ನೇ ಸಾಲಿನ ಪ್ರಥಮ ವರ್ಷದ ಎಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಾವುಂದ ರಿಚರ್ಡ್ ಮೆಮೊರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಸ್.ನಾರಾಯಣ ರಾವ್ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ಮತ್ತೋರ್ವ ಅತಿಥಿ ಖ್ಯಾತ ಉದ್ಯಮಿ ಡಾ. .ಜಿ.ಪಿ. ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋಹನದಾಸ್ ಭಟ್ ಎಸ್. ರವರು ವಿದ್ಯಾರ್ಜನೆಯ ಪ್ರಾಮುಖ್ಯತೆಯನ್ನು ಕಥೆ ಹಾಗೂ ನಿದರ್ಶನಗಳ ಮೂಲಕ ಸಭಿಕರಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ದಾರ್ಥ ಜೆ. ಶೆಟ್ಟಿಯವರು ವಹಿಸಿದ್ದರು. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ವಿಭಾಗದ ಮುಖ್ಯಸ್ಥರಾದ ಪ್ರೋ ಸತೀಶ್ ಎಸ್. ಅಮ್ಸಾಡಿಯವರು ಕಾಲೇಜಿನ ಸಾಧನೆಗಳ ಕಿರುನೋಟ ಹಾಗೂ ಕಾಲೇಜಿನಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬಿ.ಎಸ್.ಎಚ್. ವಿಭಾಗದ ಮುಖ್ಯಸ್ಥರಾದ ಪ್ರೋ. ದೀಪಕ್ ಶೆಟ್ಟಿ, ಭೌತಶಾಸ್ತ್ರ ಉಪನ್ಯಾಸಕರಾದ ಡಾ. ಅರುಣ್ ಕಾಶಿ ಎಚ್.ಕೆ. , ರಸಾಯನ ಶಾಸ್ತ್ರ ಉಪನ್ಯಾಸಕಾರದ ಡಾ. ಆರ್. ಎನ್. ಹೆಗಡೆ ಉಪಸ್ಥಿತರಿದ್ದರು.
ಅಪರಾಹ್ನ ನಡೆದ ಸಮಾರಂಭದಲ್ಲಿ ಎ.ವಿ. ಬಾಳಿಗಾ ಹಾಸ್ಪಿಟಲ್ ಉಡುಪಿ ಮನಶಾಸ್ತ್ರಜ್ಞರಾದ ಡಾ. ವಿರೂಪಾಕ್ಷ ದೇವರಮನೆಯವರು ವಿದ್ಯಾರ್ಥಿಗಳಿಗೆ ಮಾನಸಿಕ ಸಮತೋಲನದ ಬಗ್ಗೆ ಸಲಹೆ ಹಾಗೂ ಸೂಚನೆ ನೀಡಿದರು.
ಕಾರ್ಯಕ್ರಮವನ್ನು ಸಿವಿಲ್ ವಿಭಾಗದ ಮುಖ್ಯಸ್ಥರಾದ ಪ್ರೋ. ಶಶಿಕಲಾ ನಿರೂಪಿಸಿ ವಂದಿಸಿದರು.