ಮೋದಿ ಸರಕಾರ ದ್ವೇಷ ರಾಜಕಾರದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ – ವಿನಯ್ ಕುಮಾರ್ ಸೊರಕೆ

Spread the love

ಮೋದಿ ಸರಕಾರ ದ್ವೇಷ ರಾಜಕಾರದ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ – ವಿನಯ್ ಕುಮಾರ್ ಸೊರಕೆ

ಉಡುಪಿ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ಕೇಂದ್ರ ಸರಕಾರ ದ್ವೇಷ ರಾಜಕಾರಣ ಮಾಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆರೋಪಿಸಿದ್ದಾರೆ.

ಅವರು ಬುಧವಾರ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದವರು ಬಂಧಿಸಿದ್ದರ ವಿರುದ್ದ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜೋಡುಕಟ್ಟೆಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೇಂದ್ರದ ಸಂಸ್ಥೆಗಳಾದ ಐಟಿ, ಇಡಿ ಮುಂತಾದ ಸಂಸ್ಥೆಗಳನ್ನು ದುರುಪಯೋಗ ಪಡಿಸ್ತಿದೆ. ಡಿಕೆ ಶಿವಕುಮಾರ್ ಅವರನ್ನು ಬಂಧಿಸುವುದಾಗಿ ಬಿಜೆಪಿಗರು ಈ ಮೊದಲೇ ಹೇಳಿದ್ದರು ಅದನ್ನು ಇಂದು ಸಾಧಿಸಿ ತೋರಿಸಿದ್ದಾರೆ. ದ್ವೇಷಕ್ಕಾಗಿ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.

ಬಳಿಕ ಹಲವು ಸಮಯಗಳ ವರೆಗೆ ಕಿನ್ನಿಮೂಲ್ಕಿ ಉಡುಪಿ ಮುಖ್ಯ ರಸ್ತೆಯನ್ನು ತಡೆ ಮಾಡಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಯು ಆರ್ ಸಭಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ನಾಯಕರಾದ ಕಿಶನ್ ಹೆಗ್ಡೆ ಕೊಳಕೆಬೈಲು, ರಮೇಶ್ ಕಾಂಚನ್, ಯತೀಶ‍್ ಕರ್ಕೇರಾ, ದಿನೇಶ್ ಪುತ್ರನ್, ವೆರೋನಿಕಾ ಕರ್ನೆಲಿಯೊ, ರೋಶನಿ ಒಲಿವೇರಾ, ಡಾ ಸುನೀತಾ ಶೆಟ್ಟಿ, ಪ್ರಶಾಂತ್ ಜತ್ತನ್ನ, ಪ್ರಮೀಳಾ ಜತ್ತನ್ನ, ಐಡಾ ಗಿಬ್ಬಾ ಡಿಸೋಜಾ, ರೆಹಮಾನ್ ಕೊಡವೂರು, ಗಣೇಶ್ ನೆರ್ಗಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love