Spread the love
ಯುವನಿಧಿ : ಜ.8-9ರಂದು ನೋಂದಣಿ ಮೇಳ
ಮಂಗಳೂರು: ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ಪಡೆದಿರುವವರಿಗೆ ರೂ. 1500 ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಯುವನಿಧಿ” ಯೋಜನೆಯ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈಮುಗಿಲನ್ ಸೂಚಿಸಿದ್ದಾರೆ.
ಅವರು ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ, ದ.ಕ ಜಿಲ್ಲೆಯ ಎಲ್ಲಾ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ 8ಮತ್ತು 9 ರಂದು ನೋಂದÀಣಿ ಮೇಳವನ್ನು ನಡೆಸಲು ಅವರು ತಿಳಿಸಿದರು. 2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೆ ಯುವ ನಿಧಿಗೆ ನೋಂದಣಿ ಮಾಡಲು ಹೆಚ್ಚಿನ ಪ್ರತಿಕ್ರಿಯೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿಯೇ ನೋಂದಣಿ ಅಭಿಯಾನ ನಡೆಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಎ.ಎಂ. ಖಾನ್, ಮತ್ತಿತರರು ಉಪಸ್ಥಿತರಿದ್ದರು.
Spread the love