ಮ0ಗಳೂರು: ಭಾರತ ಸರ್ಕಾರವು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿಗಳನ್ನು ಗುರುತಿಸಿ ರಾಜೀವ್‍ಗಾಂಧಿ ಮಾನವ ಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿಗೌರವಿಸುತ್ತದೆ.
ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 1 ಲಕ್ಷ ನಗದು ಬಹುಮಾನ, ಬೆಳ್ಳಿ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಈ ಪ್ರಶಸ್ತಿಗಾಗಿ ಆಯ್ಕೆ ಮಾಡುವ ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯವನ್ನು ನಿರ್ವಹಿಸಿರಬೇಕು.ಸಂಘ-ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವಒಂದೇ ಮಾನದಂಡ-ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ಅದೇ ರೀತಿಯಲ್ಲಿ ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ಹಲವು ವರ್ಷಅಸಾಧಾರಣ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನುಕೇಂದ್ರ ಸರ್ಕಾರವು ಜಾರಿಗೆತಂದಿರುತ್ತದೆ. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 1 ಲಕ್ಷ ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರೂ.3ಲಕ್ಷ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಸಂಘ-ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ-ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಾಡಿರುವ ಕೆಲಸದಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಪ್ರಶಸ್ತಿಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ.
2016ನೇ ಸಾಲಿಗೆ ರಾಜೀವ್‍ಗಾಂಧಿ ಮಾನವಸೇವಾ ಪ್ರಶಸ್ತಿಗಾಗಿ ಹಾಗೂ ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು. ಇವರಕಛೇರಿಯಿಂದ ಪಡೆದು, ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿಜಿಲ್ಲಾಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ಇವರಿಗೆ ಮೇ. 25 ರೊಳಗೆ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉರ್ವಾಸ್ಟೋರ್, ಅಶೋಕ ನಗರ ಅಂಚೆ ಮಂಗಳೂರು-575006 ದೂರವಾಣಿ: 0824-2451254, 2453071ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ರಾಜೀವ್‍ಗಾಂಧಿ ಮಾನವಸೇವಾ ಪ್ರಶಸ್ತಿ ಹಾಗೂ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Spread the love
Spread the love