ಲಾಕ್ ಡೌನ್ ನಿಯಮ ಉಲ್ಲಂಘಿಸಿ ಕಚ್ಚೂರು ಕಾಳಿಕಾಂಬ ದೇವಸ್ಥಾನದಲ್ಲಿ ಸಭೆಯ – ಆಡಳಿತ ಮಂಡಳಿ ಸದಸ್ಯರ ವಿರುದ್ದ ಪ್ರಕರಣ ದಾಖಲು
ಉಡುಪಿ: ಸಾಂಕ್ರಾಮಿಕ ರೋಗವಾದ ಕೋವಿಡ್-19 ಖಾಯಿಲೆಯು ಎಲ್ಲೆಡೆ ಹರಡಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್ಡೌನ್ ಇದ್ದು, ಉಡುಪಿಯ ಮಾನ್ಯ ಜಿಲ್ಲಾಧಿಕಾರಿಗಳು ಕೋವಿಡ್-19 (ಕೊರೊನಾ ವೈರಾಣು ಖಾಯಿಲೆ-2019) ಖಾಯಿಲೆ ಹರಡುವುದನ್ನು ತಡೆಯಲು ಹೊರಡಿಸಿರುವ ಕಲಂ 144(3) ಸಿಆರ್ಪಿಸಿ ಯಂತೆ ನಿರ್ಬಂಧ ಆದೇಶವನ್ನು ಉಲ್ಲಂಘಿಸಿ ಬ್ರಹ್ಮಾವರ ತಾಲೂಕು ಕಚ್ಚೂರು ಗ್ರಾಮದ ಕಚ್ಚೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ವರ್ದ್ಯುಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಆರೋಪದ ಮೇಲೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರ ವಿರುದ್ದ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರ ವಿ. ಶ್ರೀಧರ ಆಚಾರ್ (55), ದೇವಸ್ಥಾನದ ಮೆನೇಜರ್ ಹರೀಶ್ ಆಚಾರ್ಯ, ಸಮಿತಿಯ ಸದಸ್ಯರಾದ ಚಂದ್ರ ಆಚಾರ್ಯ, ಪ್ರಕಾಶ್ ಆಚಾರ್ಯ, ಸುಬ್ರಾಯ ಆಚಾರ್ಯ, ಶ್ರೀಕಾಂತ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.
ಸಾಂಕ್ರಾಮಿಕ ರೋಗವಾದ ಕೋವಿಡ್-19 ಖಾಯಿಲೆಯು ಎಲ್ಲೆಡೆ ಹರಡಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್ಡೌನ್ ಇದ್ದು, ಉಡುಪಿಯ ಮಾನ್ಯ ಜಿಲ್ಲಾಧಿಕಾರಿಗಳು ಕೋವಿಡ್-19 (ಕೊರೊನಾ ವೈರಾಣು ಖಾಯಿಲೆ-2019) ಖಾಯಿಲೆ ಹರಡುವುದನ್ನು ತಡೆಯಲು ಹೊರಡಿಸಿರುವ ಕಲಂ 144(3) ಸಿಆರ್ಪಿಸಿ ಯಂತೆ ನಿರ್ಬಂಧ ಆದೇಶವನ್ನು ಉಲ್ಲಂಘಿಸಿ ಏಪ್ರಿಲ್ 24ರಂದು ಬೆಳಿಗ್ಗೆ 11.25 ರ ಸುಮಾರಿಗೆ ಕಚ್ಚೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ವರ್ದ್ಯುಂತ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ತಮ್ಮ ತಮ್ಮ ಮುಖಕ್ಕೆ ಮಾಸ್ಕ್ ಧರಿಸದೇ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಭಾಗವಹಿಸಿದ್ದಾರೆ ಎಂದು ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಕಲಂ 188, 269 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.