ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು – ಸಚಿವ ಯು.ಟಿ.ಖಾದರ್

Spread the love

ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್  ಬಳಸಿಕೊಂಡು  ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಸೆಕ್ಟರ್ ವತಿಯಿಂದ ಮದೀನಾದ ಕೆ.ಸಿ.ಎಫ್ ಭವನದಲ್ಲಿ ಸೋಮವಾರ  ನಡೆದ  ಅಸುಪ್ಫಾ 2ನೇ ಆವೃತ್ತಿಯ  ಸ್ಪೋಕನ್ ಇಂಗ್ಲೀಷ್ ತರಗತಿ ಉದ್ಘಾಟಿಸಿ  ಮಾತನಾಡಿದರು. ಅನಿವಾಸಿಗಳಾದ ನೀವು ವಿದೇಶದಲ್ಲಿದ್ದುಕೊಂಡೇ ಅರ್ಜಿ ಸಲ್ಲಿಸಿ,  ತಿಂಗಳೊಳಗೆ ರೇಷನ್ ಕಾರ್ಡ್ ನಿಮ್ಮ ಕೈ ಸೇರಲಿದೆ ಎಂದರು.  ಕಲಿಯುವ ಕಾಲಘಟ್ಟದಲ್ಲಿ ಇಂಗ್ಲೀಷ್  ಕಲಿಯಲು ಅಸಾಧ್ಯವಾಗಿದ್ದು, ಇದೀಗ ಭಾಷೆಯ ಸಮಸ್ಯೆ  ತಲೆದೋರುತ್ತಿದೆ, ಆದ್ರೆ ಈ ಎಲ್ಲಾ ಸಮಸ್ಯೆಗಳಿಗೆ ಕೆ.ಸಿ.ಎಫ್ ಆಧಾರ ಸ್ತಂಭವಾಗಿ ಇಂಗ್ಲೀಷ್ ಭಾಷೆ ಕಲಿಸಲು ಹೆಜ್ಬೆ ಇಟ್ಟಿರುವುದು ಶ್ಲಾಘನೀಯ ಎಂದರು.

ಪ್ರಸಕ್ತ ಸನ್ನಿವೇಶದಲ್ಲಿ ಇಂಗ್ಲೀಷ್ ಭಾಷೆ ಅತ್ಯಗತ್ಯವಾಗಿದ್ದು, ನಾವು ಇತರೆ ಭಾಷೆಗಳನ್ನು ಕಲಿತಂತೆ ನಮ್ಮ  ವ್ಯಕ್ತಿತ್ವವು ಕೂಡ ಬೆಳೆಯುತ್ತಾ ಹೋಗುತ್ತದೆ ಎಂದರು.

ಇದೇ ವೇಳೆ ಕರ್ನಾಟಕ ಇಹ್ಸಾನ್ ಮುಖ್ಯಸ್ಥ ಇಬ್ರಾಹಿಂ  ಸಖಾಫಿ ದಾವಣಗೆರೆ ಮಾತನಾಡಿ ಭಾಷೆ ಕಲಿತರೆ ಮಾತ್ರ ಪ್ರಬೋಧನ ರಂಗದಲ್ಲಿ ಮುನ್ನಡೆಯಲು ಸಾಧ್ಯ, ಈ ಹಿನ್ನೆಲೆಯಲ್ಲಿ ನಾವು ಇತರ ಭಾಷೆಯನ್ನು ಕಲಿಯಬೇಕು. ಇಂಗ್ಲೀಷ್ ಕಲಿತರೆ ಪೈಪೋಟಿ ಯುಗದಲ್ಲಿ ಎಲ್ಲವನ್ನೂ ಎದುರಿಸಲು ಸಾಧ್ಯ ಎಂದರು.

ಇದೇ ವೇಳೆ ಸ್ಪೋಕನ್ ಇಂಗ್ಲೀಷ್ ತರಗತಿಯ ಮುಖ್ಯಸ್ಥ ಉಸ್ಮಾನ್ ಮಾಸ್ಟರ್ ಪ್ರಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಕೆ.ಸಿ.ಎಫ್ ಕಾರ್ಯಕರ್ತರು ಸಚಿವ ಯು.ಟಿ.ಖಾದರ್ ಹಾಗೂ ಇಹ್ಸಾನ್ ಮುಖ್ಯಸ್ಥ ಇಬ್ರಾಹಿಂ  ಸಖಾಫಿ ದಾವಣಗೆರೆ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಕೆ.ಎಸಿ.ಎಫ್. ರಾಷ್ಟ್ರೀಯ ಸಮಿತಿ ಆಯೋಜಿಸಿದ ಅಸುಫ್ಫಾ ಪರೀಕ್ಷೆ ಯಲ್ಲಿ ಪ್ರಥಮ ಪಡೆದ ಉಮ್ಮರ್ ಗೇರುಕಟ್ಟೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಐ.ಸಿ.ಎಫ್‌. ನ ಯೂಸುಫ್ ಸಅದಿ, ಮೊಹಿಯುದ್ದೀನ್ ಸಖಾಫಿ, ಡಿ.ಕೆ.ಎಸ್.ಸಿ

ಯ ಮಹಮೂದ್ ಮುಸ್ಲಿಯಾರ್ ಉದ್ದಬೆಟ್ಟು, ಕೆಸಿಎಫ್ ಮದೀನಾ ಝೋನಲ್ ಅಧ್ಯಕ್ಷ ಫಾರೂಕ್ ನಈಮಿ, ಕೆಸಿಎಫ್ ಮದೀನಾ ಸೆಕ್ಟರ್, ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ, ಕೆಸಿಎಫ್ ಮದೀನಾ ಝೋನಲ್ ರಿಲೀಫ್ ಚೇರ್ಮನ್ ತಾಜುದ್ದೀನ್ ಸುಳ್ಯ, ರಝಾಕ್ ಅಳಕೆ ಮಜಲ್,

 ಡಾ.ರಫೀಕ್ ಉಪ್ಪಳ, ವಹಾಬ್ ಕುದ್ರೋಳಿ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಹಕೀಂ ಬೋಳಾರ್


Spread the love