ವಿದ್ಯಾರ್ಥಿಗಳಿಗೆ ಚೂರಿ ಇರಿತ ಪ್ರಕರಣ: ನಾಲ್ವರ ಬಂಧನ
ಮಂಗಳೂರು: ಬಂಟ್ವಾಳದ ಕಲ್ಪನೆ ಎಂಬಲ್ಲಿ ವಿದ್ಯಾರ್ಥಿ ಸಹಿತ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ದೇವದಾಸ (30), ಪ್ರಶಾಂತ್ (28), ಸತೀಶ ಯಾನೆ ಕಾಳು (30) ಮತ್ತು ಉಮೇಶ (30)
ಸೋಮವಾರ ಗುರುಪುರ ಕೈಕಂಬದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಬೈಕಿನಲ್ಲಿ ಬರುತ್ತಿದ್ದ ಬದ್ರಿಯಾ ನಗರದ ನಿವಾಸಿ ವಿದ್ಯಾರ್ಥಿ ಜುನೈದ್ ಮತ್ತು ಬಿಸಿರೋಡು ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಸಿನಾನ್ ಎಂಬವರನ್ನು ಇನ್ನೊಂದು ಬೈಕಿನಲ್ಲಿ ಬಂದ ಆರೋಪಿಗಳು ಕಳ್ಳಿಗೆ ಗ್ರಾಮದ ಕಲ್ಪನೆಯಲ್ಲಿ ಅಡ್ಡಗಟ್ಟಿ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದರಲ್ಲದೆ ಚೂರಿಯಿಂದ ಇರಿದಿದ್ದರು.
ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ ಪೋಲಿಸರು ಬುಧವಾರ ಮುಂಜಾನೆ ಆರೋಪಿಗಳು ಉಡುಪಿ ಕಡೆಗೆ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ವೇಳೆ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಅಬ್ಬೆಟ್ಟು ಶಾಲೆಯ ಬಳಿ ಬಂಧಿಸಿದ್ದಾರೆ.
ದಕ ಜಿಲ್ಲಾ ಎಸ್ಪಿ ಭೂಷಣ್ ಜಿ ಬೊರಸೆ ನಿರ್ದೇಶನದಂತೆ ಡಿಸಿಐಬಿ ಸಿಪಿಐ ಎ ಅಮಾನುಲ್ಲಾ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ, ರವೀಶ್ ಸಿ ಆರ್, ವೃತ್ತನಿರೀಕ್ಷಕ ಬಿಕೆ ಮಂಜಯ್ಯ, ಮಾರ್ಗದರ್ಶನದಂತೆ ಡಿಸಿಐಬಿ ಸಿಬಂದಿಯಾದ ಸಂಜೀವ ಪುರುಷ, ಲಕ್ಷ್ಮಣ ಕೆಜಿ, ಪಳನಿವೇಲು, ಇಕ್ಬಾಲ್, ಉದಯ್ ರೈ, ಸತೀಶ್, ವಾಸು ನಾಯ್ಕ ಮತ್ತು ವಿಜಯ ಗೌಡ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.