ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the love

ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

6 ಕ್ಷೇತ್ರಗಳ ಪೈಕಿ 1 ಕ್ಷೇತ್ರ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ವಿಧಾನಪರಿಷತ್‌ನ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ್ ಪಾಟೀಲ್, ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಪರಿಷತ್‌ನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಮತ್ತು ವಿಧಾನಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love