ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಸರಕಾರ ಬದ್ದ : ಪ್ರಮೋದ್ ಮಧ್ವರಾಜ್

Spread the love

ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಸರಕಾರ ಬದ್ದ : ಪ್ರಮೋದ್ ಮಧ್ವರಾಜ್

ಉಡುಪಿ: ರಾಜ್ಯ ಸರಕಾರವು ವಿಶ್ವಕರ್ಮ ಸಮಾಜದ ಹಿತವನ್ನು ಗಮನದಲ್ಲಿರಿಸಿ ಅವರ ಅಭಿವೃದ್ಧಿಗೆ `ವಿಶ್ವಕರ್ಮ ಅಭಿವೃದ್ಧಿ ನಿಗಮ’ ಸ್ಥಾಪಿಸಿರುವುದು ಸಮುದಾಯವನ್ನು ಗೌರವಿಸಿರುವುದಕ್ಕೆ ಸಾಕ್ಷಿ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರಿಂದು ಉಡುಪಿ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ `ವಿಶ್ವಕರ್ಮ ಜಯಂತಿ -2016′ ಉದ್ಘಾಟಿಸಿ ಮಾತನಾಡಿದರು.

vishwakarma vishwakarma vishwakarma1 vishwakarma2

ಅತ್ಯಂತ ನಿಪುಣ, ಕೌಶಲ್ಯ ಹೊಂದಿದ ಜನಾಂಗವಿದಾಗಿದ್ದು, ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಆರಂಭಿಸಿದೆ. ಇದು ಐತಿಹಾಸಿಕ ದಿನ; ಈ ಮೂಲಕ ಸರಕಾರವು ವಿಶ್ವಕರ್ಮ ಸಮಾಜಕ್ಕೆ ವಿಶೇಷ ಗೌರವ ಸಲ್ಲಿಸಿದಂತಾಗಿದೆ ಎಂದರು.

ಜಿ.ಪ ಅಧ್ಯಕ್ಷ ದಿನಕರ ಬಾಬು, ತಾ.ಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿ.ಪಂ ಸದಸ್ಯೆ ಶಿಲ್ಪಾ ಸುವರ್ಣ, ತಹಶೀಲ್ದಾರ್ ಮಹೇಶ್ಚಂದ್ರ, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧಿಕಾರೇತರ ಸದಸ್ಯ ಎಂ.ಪ್ರಭಾಕರ ಆಚಾರ್ಯ, ದ.ಕ ಮತ್ತು ಉಡುಪಿ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಯು.ಕೆ.ಎಸ್. ಸೀತಾರಾಮ ಆಚಾರ್ಯ, ವಿದ್ವಾನ್ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು. ಸಂಸ್ಕøತ ಅಧ್ಯಾಪಕ ವಿಶ್ವನಾಥ ಬಿ.ಎಲ್ ವಿಶೇಷ ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಅನುರಾಧ ಸ್ವಾಗತಿಸಿದರು. ಮುರಲೀಧರ್ ಕೆ ಕಾರ್ಯಕ್ರಮ ನಿರ್ವಹಿಸಿದರು.


Spread the love