ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

Spread the love

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಮಂಗಳೂರು: ಮೆಡಿಕಲ್ ಕಾಲೀಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

ಕಳೆದ ದಿನ ಮೇ 8 ರಂದು ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿಯ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಅತ್ಯಂತ ಗಂಭೀರವಾಗಿದೆ.ಈ ಕೃತ್ಯ ನಡೆಸಿದ ಬಾಲಕ ಇಂತಹ ಮಾನಸಿಕತೆ ಹೊಂದಿರಲು ಇವನು ಯಾವುದೇ ಜಿಹಾದಿ ಸಂಘಟನೆಗೆ ಸೇರಿಸುವ ಸಂಶಯ ಬಲವಾಗಿದ್ದು, ಅಲ್ಲದೆ ವ್ಯವಸ್ಥಿತ ತಂಡ ಬಾಲಕನನ್ನು ಇಂತಹ ಕೃತ್ಯ ನಡೆಸಲು ಪ್ರೇರೇಪಿಸುವ ಸಾಧ್ಯತೆ ಇದೆ.

ಉಡುಪಿಯಲ್ಲಿ ಇಂತಹ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು ಅಲ್ಲದೆ ಈ ಕೃತ್ಯ ನಡೆಸಿರುವವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.


Spread the love