ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

Spread the love

ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ಲಚ್ಚಿ ಪೂಜಾರ್ತಿಯವರು ಭಾನುವಾರ ವಯೋಸಹಜ ಅಸೌಖ್ಯದಿಂದ ನಿಧನರಾದರು ಅವರಿಗೆ 97 ವರ್ಷ ವಯಸ್ಸಾಗಿತ್ತು

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದ್ದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು.

ಇವರ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ರಾಜ್ಯ, ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


Spread the love