ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೇ ಇರುವುದು ಬೇಸರದ ವಿಚಾರ — ಶೌವಾದ್ ಗೂನಡ್ಕ

Spread the love

ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೇ ಇರುವುದು ಬೇಸರದ ವಿಚಾರ — ಶೌವಾದ್ ಗೂನಡ್ಕ

ಈ ಹಿಂದಿನ ಸಿದ್ದರಾಮಯ್ಯನವರ ಬಜೆಟ್ ನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿಗೆ ತರುವುದಾಗಿ ಘೋಷಣೆಯನ್ನು ಮಾಡಿತ್ತು, ಆದರೆ ಈಗಿನ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್.ಸಮ್ಮಿಶ್ರ ಸರ್ಕಾರವು ಅದರ ಕುರಿತಾಗಿ ಯಾವುದೇ ಸ್ಪಷ್ಟ ನಿರ್ಧಾರವನ್ನು ತೆಗೆದುಕೊಳ್ಳದೇ ಇರುವುದು ಬೇಸರವನ್ನು ತಂದಿದೆ ಎಂದು ದ.ಕ.ಜಿಲ್ಲಾ ಎನ್.ಎಸ್.ಯು.ಐ.ಘಟಕದ ಉಪಾಧ್ಯಕ್ಷ ಶೌವಾದ್ ಗೂನಡ್ಕರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಯೋಜನೆಯನ್ನು ಘೋಷಿಸುವುದಾಗಿ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಭರವಸೆಯನ್ನು ನೀಡಿದ್ದರು, ಆದರೆ ಬಜೆಟ್ ನಲ್ಲಿ ಉಚಿತ ಬಸ್ ಪಾಸ್ ಕುರಿತಾಗಿ ಯಾವುದೇ ಹೇಳಿಕೆಯನ್ನು ನೀಡದೇ ವಿದ್ಯಾರ್ಥಿಗಳನ್ನು ಗೊಂದಲಕ್ಕೀಡಾಗುವಂತೆ ಮಾಡಲಾಗಿದೆ.ಈಗಾಗಲೇ ಉಚಿತ ಬಸ್ ಪಾಸ್ ನ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ಕೂಡ ದೊರಕದೆ ವಿದ್ಯಾರ್ಥಿಗಳು ಅಡಕತ್ತರಿಯಲ್ಲಿ ಸಿಲುಕಿದ್ದಾರೆ.ಸರ್ಕಾರವು ಇಂತಹ ಸೂಕ್ಷ್ಮ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ ಈ ಎಲ್ಲಾ ವಿಚಾರಗಳ ಕುರಿತಾಗಿ ಎನ್.ಎಸ್.ಯು.ಐ.ಸಂಘಟನೆಯು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾರವರ ಮೂಲಕ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರ ಗಮನಕ್ಕೆ ತರುವಂತೆ ಮಾಡಲಾಗುವುದು ಎಂದು ಶೌವಾದ್ ಗೂನಡ್ಕರವರು ತಿಳಿಸಿದ್ದಾರೆ.


Spread the love