ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ಕು ಆರೋಪಿಗಳ ಬಂಧನ

Spread the love

ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ಕು ಆರೋಪಿಗಳ ಬಂಧನ

ಮಂಗಳೂರು: ನವೆಂಬರ್ 18ರಂದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿ ಅಳಿವೆ ಬಾವಿಯ ಬಳಿಯಲ್ಲಿ ಹುಡುಗಿಯನ್ನು ಬಲವಂತದಿಂದ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ 7 ಜನ ಆರೋಪಿಗಳ ವಿರುದ್ದ ಠಾಣಾ ಅ.ಕ್ರ 60/2018 ಕಲಂ 376(ಡಿ), 323, 504, 506 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದ ಆರೋಪಿಗಳ ಪತ್ತೆಗಾಗಿ ಪಣಂಬೂರು ಇನ್ ಪೆಕ್ಟರ್ ರಫೀಕ್ ಕೆ.ಎಂ ಮತ್ತು ಮಂಗಳೂರು ಉತ್ತರ ಉಪ-ವಿಭಾಗದ ರೌಡಿ ನಿಗ್ರಹ ದಳದ ವಿಶೇಷ ತಂಡವನ್ನು ರಚಿಸಲಾಗಿತ್ತು. ಅದರಂತೆ ಮಂಗಳವಾರ 4 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

ಬಂಧಿತರನ್ನು ತೋಟಬೆಂಗ್ರೆ ನಿವಾಸಿಗಳಾದ ಪ್ರಜ್ವಲ್ (25), ಆದಿತ್ಯ (22), ಅರುಣ್ (25) ಬಂಧಿತರು. ಇನ್ನುಳಿದ ಮೂವರು ಅಪ್ರಾಪ್ತರಾಗಿದ್ದು, ಮತ್ತೋರ್ವನ ಬಂಧನಕ್ಕೆ ಬಲೆ ಬೀಸಲಾಗಿದೆ.

ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ನಗರದ ಪೊಲೀಸು ಆಯುಕ್ತರಾದ ಟಿ. ಆರ್ ಸುರೇಶ್ ಐ.ಪಿ.ಎಸ್ ಇವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಉಪ-ಆಯುಕ್ತರುಗಳಾದ ಹನುಮಂತರಾಯ, ಐ.ಪಿ.ಎಸ್(ಕಾ.ಸು) ಮತ್ತು ಉಮಾ ಪ್ರಶಾಂತ್(ಅಪರಾಧ ಮತ್ತು ಸಂಚಾರ) ಇವರ ಮಾರ್ಗದರ್ಶನದಂತೆ ಮಂಗಳೂರು ಸಂಚಾರ ಉಪ-ವಿಭಾಗ ಸಹಾಯಕ ಪೊಲೀಸ್ ಆಯುಕ್ತರಾದ ಮಂಜುನಾಥ ಶೆಟ್ಟಿ ಇವರ ನೇತೃತ್ವ್ವದಲ್ಲಿ ಪಣಂಬೂರು ಠಾಣಾ ಪೊಲೀಸು ನಿರೀಕ್ಷಕರಾದ ರಫೀಕ್.ಕೆ.ಎಮ್, ಮಂಗಳೂರು ಮಹಿಳಾ ಠಾಣಾ ಪಿಐ ಕಲಾವತಿ, ಪಣಂಬೂರು ಠಾಣಾ ಪಿ.ಎಸ್.ಐ(ಕಾ.ಸು) ಉಮೇಶ್ ಕುಮಾರ್.ಎಂ.ಎನ್ ಹಾಗೂ ಮಂಗಳೂರು ನಗರ ಉತ್ತರ ಉಪ-ವಿಭಾಗ ರೌಡಿ ನಿಗ್ರಹ ದಳದ ಅಧಿಕಾರಿ/ ಸಿಬ್ಬಂದಿಗಳಾದ ಎ.ಎಸ್.ಐ ಮೊಹಮ್ಮದ್, ಕುಶಲ ಮಣಿಯಾಣಿ, ವಿಜಯ ಕಾಂಚನ್, ಸತೀಶ್.ಎಂ, ಶರಣ್ ಕಾಳಿ ಮತ್ತು ಪಣಂಬೂರು ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಿರುತ್ತಾರೆ.


Spread the love