ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ – ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

Spread the love

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ – ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು: ಕೊರೋನಾ ಹಿನ್ನಲೆಯಲ್ಲಿ ರಾಜ್ಯ ಸರಕಾರ ಗಣೇಶ ಚತುರ್ಥಿ ಆಚರಣೆ ಹಿನ್ನಲೆಯಲ್ಲಿ ಹೊರಡಿಸಿದ್ದ ಆದೇಶವನ್ನು ಪರಿಷ್ಕರಿಸಿ ರಾಜ್ಯ ಸರಕಾರ ಹೊಸ ನಿಯಮಾವಳಿ ರೂಪಿಸಿ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆಗೆ ನಿಯಮಾವಳಿ ರೂಪಿಸಿ ಹೊಸ ಆದೇಶ ಹೊರಡಿಸಿದೆ.
ರಾಜ್ಯ ಸರಕಾರ ಹೊರಡಿಸಿದ ಪರಿಷ್ಕೃತ ಮಾರ್ಗಸೂಚಿ ಇಂತಿದೆ:

1. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಮೂರ್ತಿ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಪ್ರತಿಷ್ಠಾಪನೆ ಮಾಡುವವರು ಎರಡು ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು.

2. ಪಾರಂಪರಿಕವಾಗಿ ಗಣೇಶೋತ್ಸವ ಮಾಡುವಲ್ಲಿ ಗಣೇಶೋತ್ಸವ ಸಮಿತಿ ಅಥವಾ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.

3. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು.

4. ಗಣೇಶೋತ್ಸವದ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಾಣ ಮಾಡಬೇಕು. ಒಮ್ಮೆಲೆ 20 ಕ್ಕಿಂತ ಅಧಿಕ ಜನರು ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹೀಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಅವಕಾಶವಿಲ್ಲ.

6. ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜನೆ ಮಾಡುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪನ ಮಾಡಿವವರು ಗಣೇಶ ಮೂರ್ತಿಯನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸುವುದು.
8, ಶ್ರೀ ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ | ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು.

9, ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಕ, 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.

10. ಸಾರ್ವಜನಿಕರು ಮತ್ತು ಭಕ್ತಾಧಿಗಳು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.
11.ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೆ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
12. ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂಧರ್ಭಕ್ಕನುಗುಣವಾಗಿ ಸರ್ಕಾರ, విశే రాగం ಸ್ಥಳೀಯ ಸಂಖ್ಯೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲ ಆದೇಶ | ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
13. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬರದಂತೆ ಕಾಪಾಡುವುದು.
14, ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ | ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ಕೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತು/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.


Spread the love