ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಸರಕಾರದ ನಿಯಮಾವಳಿ ಮೀರದಿರಿ – ಹರೀಶ್ ನಾಯ್ಕ್

Spread the love

ಕುಂದಾಪುರ: ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಸರಕಾರದ ನಿಯಮಾವಳಿ ಮೀರದಿರಿ – ಹರೀಶ್ ನಾಯ್ಕ್

ಕುಂದಾಪುರ: ಕೋವಿಡ್- 19 ಹಿನ್ನೆಲೆಯಲ್ಲಿ ಸರಕಾರದ ನಿಯಮಾವಳಿಯಂತೆ ಸರಳ ಮತ್ತು ಸಂಪ್ರದಾಯಬದ್ಧ ರೀತಿಯಲ್ಲಿ ಗಣೇಶೋತ್ಸವ ಆಚರಣೆ ನಡೆಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕುಂದಾಪುರ ನಗರ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಹೇಳಿದರು.

ಅವರು ಗುರುವಾರ ರಕ್ತೇಶ್ವರಿ ಸಭಾಂಗಣದಲ್ಲಿ ಕುಂದಾಪುರ ಠಾಣಾ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಆಯೋಜಕ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಗಣೇಶೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಜನರು ಗುಂಪುಗೂಡದಂತೆ ಎಚ್ಚರಿಕೆ ವಹಿಸುವುದು ಆಯೋಜಕರ ಕರ್ತವ್ಯವಾಗಿದೆ. ಅಲ್ಲದೆ ಸರಕಾರ ರೂಪಿಸಿದ ಕಾನೂನು ನಿಯಮಾವಳು ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಟಾಪನೆ ನಡೆಸದೆ ಆದಷ್ಟು ಯಾವುದಾದರೂ ಸಭಾಂಗಣದಲ್ಲಿ ಗಣೇಶೋತ್ಸವ ಆಚರಣೆಗೆ ಒತ್ತು ನೀಡುವಂತೆ ಮನವಿ ಮಾಡಿದರು. ಗಣೇಶೋತ್ಸವ ಆಯೋಜಕರು ಮೆರವಣಿಗೆ ನಡೆಸದೆ ಗಣಪತಿ ಮೂರ್ತಿಯನ್ನು ವಿಸರ್ಜನೆ ನಡೆಸಬೇಕು. ಅಲ್ಲದೆ ಗಣೇಶೋತ್ಸವ ಆಚರಣೆಗೆ ಸೂಕ್ತ ಪರವಾನಿಗೆ ಪಡೆಯಬೇಕು ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕುಂದಾಪುರ ನಗರಠಾಣಾ ವ್ಯಾಪ್ತಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love