ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ರೂ. 1000 ದಂಡ! – ಸಚಿವ ಡಾ ಕೆ ಸುಧಾಕರ್

Spread the love

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ರೂ. 1000 ದಂಡ! – ಸಚಿವ ಡಾ ಕೆ ಸುಧಾಕರ್

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂಬಂಧ ಗುರುವಾರ ಅಧಿಕೃತ ಆದೇಶ ಹೊರ ಬೀಳಲಿದೆ, ಪೂರ್ತಿಯಾಗಿ ಮಾಸ್ಕ್ ಧರಿಸದರಿಗೂ ದಂಡ ಅನ್ವಯವಾಗಲಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರೂ. ದಂಡವನ್ನು ಹೆಚ್ಚಿಸಲಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲು ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.

ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ,  ಮಾಸ್ಕ್ ಧರಿಸದ, ಭೌತಿಕ ಅಂತರ ಕಾಯ್ದುಕೊಳ್ಳದ, ಸಭೆ-ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಒಂದೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.

ಲಾಕ್ ಡೌನ್ ತೆರವು ಬಳಿಕ ಕಳೆದೆರಡು ತಿಂಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈಗಿರುವ ಏಕೈಕ ಮಾರ್ಗವೆಂದರೆ ಕಠಿಣ ಕಾನೂನು ಜಾರಿಗೆ ತರುವುದು. ಸರಕಾರದ ಮಾರ್ಗಸೂಚಿ ಅನುಸರಿಸದವರ ವಿರುದ್ದ ಕಠಿಣ ಶಿಕ್ಷೆ ಹಾಗೂ ದಂಡ ಪ್ರಯೋಗ ಅನಿವಾರ್ಯ ಎಂದರು.

ಇತ್ತೀಚೆಗೆ ರಾಜಕೀಯ, ಧಾರ್ಮಿಕ, ಸಾಂಸ್ಕೃತಕ ಸಭೆ ಸಮಾರಂಭಗಳು ಹೆಚ್ಚಾಗಿದ್ದು,ಜನರು ಗುಂಪುಗೂಡಿ ಭಾಗ ವಹಿಸುತ್ತಿದ್ದಾರೆ. ಇದರಿಂದ ಸೋಂಕು ವೇಗವಾಗಿ ಹರಡುತ್ತಿರುವುದು ಗಮನಕ್ಕೆ ಬಂದಿದೆ. ಇಂಥ ಸಮಾರಂಭಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಸೋಂಕು ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೇ ತಜ್ಞರು ಮತ್ತು ಅಧಿಕಾರಿಗಳು ಕೆಲ ಸಲಹೆಗಳನ್ನು ನೀಡಿದ್ದಾರೆ ಎಂದು ವಿವರಿಸಿದ ರು. ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ ಹೇಳಿದರು.

ಮಾಸ್ಕ್ ಧರಿಸದ, ಭೌತಿಕ ಅಂತರ ಕಾಯ್ದುಕೊಳ್ಳದ, ಸಭೆ-ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಒಂದೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದರು.

ಲಾಕ್ ಡೌನ್ ತೆರವು ಬಳಿಕ ಕಳೆದೆರಡು ತಿಂಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈಗಿರುವ ಏಕೈಕ ಮಾರ್ಗವೆಂದರೆ ಕಠಿಣ ಕಾನೂನು ಜಾರಿಗೆ ತರುವುದು. ಸರಕಾರದ ಮಾರ್ಗಸೂಚಿ ಅನುಸರಿಸದವರ ವಿರುದ್ದ ಕಠಿಣ ಶಿಕ್ಷೆ ಹಾಗೂ ದಂಡ ಪ್ರಯೋಗ ಅನಿವಾರ್ಯ ಎಂದರು.
ಇತ್ತೀಚೆಗೆ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಸಭೆ ಸಮಾರಂಭಗಳು ಹೆಚ್ಚಾಗಿದ್ದು,ಜನರು ಗುಂಪುಗೂಡಿ ಭಾಗ ವಹಿಸುತ್ತಿದ್ದಾರೆ. ಇದರಿಂದ ಸೋಂಕು ವೇಗವಾಗಿ ಹರಡುತ್ತಿರುವುದು ಗಮನಕ್ಕೆ ಬಂದಿದೆ. ಇಂಥ

ಸಮಾರಂಭಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಲಾಗಿದೆ. ಸೋಂಕು ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೇ ತಜ್ಞರು ಮತ್ತು ಅಧಿಕಾರಿಗಳು ಕೆಲ ಸಲಹೆಗಳನ್ನು ನೀಡಿದ್ದಾರೆ ಎಂದು ವಿವರಿಸಿದರು.


Spread the love