ಸಾರ್ವಜನಿಕರ ಸಮಸ್ಯೆ- ಜಿಲ್ಲಾಧಿಕಾರಿಗಳಿಂದ ನೇರ ಫೋನ್ ಇನ್ ಕಾರ್ಯಕ್ರಮ

Spread the love

ಸಾರ್ವಜನಿಕರ ಸಮಸ್ಯೆ- ಜಿಲ್ಲಾಧಿಕಾರಿಗಳಿಂದ ನೇರ ಫೋನ್ ಇನ್ ಕಾರ್ಯಕ್ರಮ

ಉಡುಪಿ: ಜಿಲ್ಲೆಯಲ್ಲಿರುವ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಲ್ಲಿಯೇ ತಕ್ಷಣವೇ ನಿವಾರಿಸುವ ಸಲುವಾಗಿ ಮಾರ್ಚ್ 27 ರಂದು ಬೆ.10 ಗಂಟೆಯಿಂದ 11 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾ ಮಟ್ಟದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ದೂರವಾಣಿ ಮುಖಾಂತರ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಒದಗಿಸಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ಜಿಲ್ಲೆಯ ನಾಗರಿಕರು ಕಾರ್ಯಕ್ರಮದ ಮೂಲಕ ಸಮಸ್ಯೆಗಳನ್ನು ವಿವರಿಸಿದಲ್ಲಿ ಉಪಸ್ಥಿತರಿರುವ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ತಕ್ಷಣವೇ ಅಲ್ಲಿಯೇ ಮಾಹಿತಿ ಹಾಗೂ ಕ್ರಮ ಕೈಗೊಳ್ಳಲಾಗುವುದು.

ಜಿಲ್ಲೆಯ ನಾಗರಿಕರು ಮಾರ್ಚ್ 27 ರಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಟೋಲ್ ಫ್ರೀ ನಂಬರ್ 1077 ಅಥವಾ ದೂರವಾಣೀ ಸಂಖ್ಯೆ 0820-2574802 ಗೆ ಕರೆ ಮಾಡಿ ಸಮಸ್ಯೆಗಳ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದಲ್ಲಿ ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರ ಮೂಲಕ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮ ಸದುಪಯೋಗ ಪಡೆಯುವಂತೆ ಪ್ರಕಟಣೆ ತಿಳಿಸಿದೆ.


Spread the love