ಸಾರ್ವಜನಿಕರು ರಸ್ತೆ ನಿಯಮಗಳನ್ನು ಪಾಲಿಸಿ ಡಿಸಿಪಿ ಡಾ ಸಂಜೀವ್ ಪಾಟೀಲ್
ಮಂಗಳೂರು: ಮಾರ್ಕೆಟ್ ರಸ್ತೆಯಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಯ ಕುರಿತು ಟ್ರಾಫಿಕ್ ಹಾಗೂ ಕ್ರೈಂ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಟ್ರಾಫಿಕ್ ಎಸಿಪಿ ತಿಲಕ್ ಚಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾರ್ಕೆಟ್ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ರಸ್ತೆಯ ಎರಡು ಬದಿಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಇದರಿಂದ ವ್ಯವಸ್ಥಿತ ಟ್ರಾಫಿಕ್ ವ್ಯವಸ್ಥೆ ಮಾಡಲು ಅಸಾಧ್ಯವಾಗುತ್ತದೆ. ಟ್ರಾಫಿಕ್ ಸಮಸ್ಯೆ ಉಂಟಾದ ಸಮಯದಲ್ಲಿ ಸಾರ್ವಜನಿಕರು ಪೋಲಿಸರಿಗೆ ಗುರಿಮಾಡುವುದು ಸಾಮಾನ್ಯವಾಗಿದೆ. ಸಾರ್ವಜನಿಕರು ರಸ್ತೆ ಸುರಕ್ಷತ ನಿಯಮಗಳನ್ನು ಸರಿಯಾಗಿ ಪಾಲಿಸದ ಪರಿಣಾಮ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ.
ಮ್ಯಾಂಗಲೋರಿಯನ್ ಡಾಟ್ ಕಾಮ್ ನೊಂದಿಗೆ ಮಾತನಾಡಿದ ಡಿಸಿಪಿ ಡಾ ಸಂಜೀವ್ ಪಾಟಿಲ್ ಅವರು ಮಹಾನಗರ ಪಾಲಿಕೆ ಸಾರ್ವಜನಿಕರಿಗೆ ವ್ಯವಸ್ಥಿತ ಪಾರ್ಕಿಂಗ್ ವ್ಯವಸ್ಥೆಯನ್ನು ಮಾರ್ಕೆಟ್ ರಸ್ತೆ ವ್ಯಾಪ್ತಿಯಲ್ಲಿ ಮಾಡಿಕೊಡಬೇಕು. ಪೋಲಿಸರು ತಮ್ಮಿಂದ ಸಾಧ್ಯವಾದಷ್ಟು ಮಟ್ಟಿಗೆ ಟ್ರಾಫಿಕ್ ವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಇದೇ ವೇಳೆ ಸಾರ್ವಜನಿಕರು ಸಹ ಟ್ರಾಫಿಕ್ ನಿಯಮಗಳನ್ನು ಪಾಲಿಸಿ ಪೋಲಿಸರೊಂದಿಗೆ ಟ್ರಾಫಿಕ್ ವ್ಯವಸ್ಥೆ ಸರಿಪಡಿಸುವಲ್ಲಿ ಸಹಕಾರ ನೀಡಬೇಕು.ಎಂದರು.