ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ : ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Spread the love

ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ : ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್ 19) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಆಗಸ್ಟ್ 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್ನ ಆದೇಶವನ್ನು ಆ.29ಕ್ಕೆ ಮುಂದೂಡುವಂತೆ ಸೂಚಿಸಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಇಂದು (ಆಗಸ್ಟ್ 19) ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ವಿಚಾರಣೆ ನಡೆಸಿತು. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.


Spread the love