ಸಿಸಿಬಿ ಕಾರ್ಯಾಚರಣೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯ ಸೆರೆ  

Spread the love

ಸಿಸಿಬಿ ಕಾರ್ಯಾಚರಣೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯ ಸೆರೆ  

ಮಂಗಳೂರು: 1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ವರ್ಷದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಬಿಡುಗಡೆಗೊಂಡು ಪ್ರಕರಣದ ವಿಚಾರಣೆ ಸಮಯ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ಇಸವಿಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಕ್ ಮಾಡಿದ್ದ ಕಾರಿನ ಡೋರ್ ತೆರೆದು ಬೆಲೆಬಾಳುವ ಸೊತ್ತುಗಳನ್ನು ಕಳವು ಮಾಡಿದ ಒಟ್ಟು 3 ಪ್ರಕರಣಗಳಲ್ಲಿ ಭಾಗಿಯಾಗಿ ದಸ್ತಗಿರಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ನಂತರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ  ಕಡಬ ನಿವಾಸಿ ಅಬ್ದುಲ್ ಹಮೀದ್, ಪ್ರಾಯ(50),ಎಂಬಾತನನ್ನು ಧರ್ಮಸ್ಥಳ ಬಳಿಯಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿಯವರಾದ ಶ್ರೀ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ಇನ್ಸ್ ಪೆಕ್ಟರ್ ರಫೀಕ್ ಕೆ ಎಂ, ಪಿಎಸ್ಐ ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು. 12 ವರ್ಷಗಳ ಹಳೆಯ ಪ್ರಕರಣದ ಆರೋಪಿ ಅಬ್ದುಲ್ ಹಮೀದ್ ಎಂಬಾತನನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಮಪ್ ಅಗ್ರವಾಲ್, ಐಪಿಎಸ್ ರವರು ಶ್ಲಾಫಿಸಿರುತ್ತಾರೆ.

Spread the love
Subscribe
Notify of

0 Comments
Inline Feedbacks
View all comments