ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ

Spread the love

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ

ಮಂಗಳೂರು: ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.

ಮಂಗಳೂರು ನಗರದ ಪಡೀಲ್ ಪರಿಸರದಲ್ಲಿ ವ್ಯಕ್ತಿಯೋರ್ವನು MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಬಜಾಲ್ ಪಡ್ಪು ಹೌಸ್ ನಿವಾಸಿ ಹಸೈನಾರ್ @ ಅಚ್ಚು(32 ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 12 ಗ್ರಾಂ ತೂಕದ ರೂ. 60,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 70,500/-ಆಗಬಹುದು. ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈತನ ವಿರುದ್ದ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿ ಮತ್ತು ಮಾದಕ ವಸ್ತು ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.


Spread the love