ಹಾಸನದ ಯುವ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಸಾವು

Spread the love

ಹಾಸನದ ಯುವ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಸಾವು

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ.

ಹರ್ಷವರ್ಧನ್ (25) .ಮೃತ ದುರ್ದೈವಿ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಬಳಿ ಸಂಜೆ 4.30 ರ ವೇಳೆಗೆ ಜೀಪ್ ನ ಟೈರ್ ಸ್ಫೋಟವಾದ ಕಾರಣ ಜೀಪ್ ಮೂರು ಸುತ್ತು ಉರುಳಿ ಅದರಲ್ಲಿ ಪ್ರಯಾಣಿಸುತ್ತಿದ್ದ ಹರ್ಷವರ್ಧನ್ ತಲೆಗೆ ಹಾಗೂ ದೇಹದ ಇನ್ನಿತರ ಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದಿತ್ತು.

ಜೀಪ್ ಚಾಲಕ ಮಂಜೇಗೌಡರಿಗೂ ಗಾಯಗಳಾಗಿದ್ದು, ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮೈಸೂರಿನ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿ ಭೇಟಿಯಾಗಿದ್ದ ಹರ್ಷವರ್ಧನ್ ಮಹತ್ವದ ಮಾತುಕತೆ ನಡೆಸಿದ್ದರು. ಈ ವೇಳೆ ಹರ್ಷವರ್ಧನ್ಗೆ ಶುಭಕೋರಿ ಕಳುಹಿಸಲಾಗಿತ್ತು. ಮಧ್ಯಪ್ರದೇಶ ಮೂಲದ ಹರ್ಷವರ್ಧನ್ ಅಧಿಕಾರ ಸ್ವೀಕಾರಕ್ಕಾಗಿ ಮೈಸೂರಿನಿಂದ ಮಾರ್ಗದ ಮೂಲಕ ಹಾಸನಕ್ಕೆ ಆಗಮಿಸಿದ್ದಾರೆ. ಹರ್ಷವರ್ಧನ್ ಸಾವಿನ ಸುದ್ದಿಯನ್ನು ಆಸ್ಪತ್ರೆ ಮುಖ್ಯಸ್ಥ ಡಾ. ಬಷೀರ್ ಸ್ಪಷ್ಟಪಡಿಸಿದ್ದಾರೆ.

ಕಿತ್ತಾನೆ ಗ್ರಾಮದ ಬಳಿಕ ಅಪಘಾತದ ಮಾಹಿತಿ ಸಿಗುತ್ತಿದ್ದಂತೆ ಹಾಸನ ಎಸ್ಪಿ ಮೊಹಮದ್ ಸುಜಿತಾ, ಎಎಸ್ಪಿಗಳಾದ ತಮ್ಮಯ್ಯ, ವೆಂಕಟೇಶ ನಾಯ್ದು ಸ್ಥಳಕ್ಕೆ ಧಾವಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷವರ್ಧನ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಹಾಸನ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ಭೇಟಿ ನೀಡಿದ್ದರು. ಪೊಲೀಸ್ ಅಧಿಕಾರಿಗಳ ದಂಡ ಆಸ್ಪತ್ರೆಯಲ್ಲಿ ಠಿಕಾಣಿ ಹೂಡಿತ್ತು. ವೈದ್ಯರ ತಂಡದ ಸಮಾಲೋಚನೆ ನಡೆಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ ಕುರಿತು ಪೊಲೀಸರು ಚರ್ಚಿಸಿದ್ದರು.

ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ,ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಒಂದು ಹಂತದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶೂನ್ಯ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಕರೆದೊಯ್ಯುವ ಚಿಂತನೆ ಮಾಡಿ ಆಂಬ್ಯುಲೆನ್ಸ್ ಕರೆಸಿದ್ದರು. ಏನೆಲ್ಲ ಪ್ರಯತ್ನ ಮಾಡಿದರೂ ವಿಧಿಯ ಲೀಲೆ ಹರ್ಷಬರ್ಧನ್ ಪ್ರಾಣಪಕ್ಷಿ ಹಾರಿಹೋಯಿತು.

ಮೂಲತಃ ಬಿಹಾರದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾಜಿಲ್ಲೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸ್ ಮೂಲ ತಿಳಿಸಿದೆ. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಪಡೆದು 2022-23 ರ ಐಪಿಎಸ್ ಬ್ಯಾಚ್ ನಲ್ಲಿ ತೇರ್ಗಡೆ ಹೊಂದಿದ್ದ ಇವರು ಕರ್ನಾಟಕ ಕೇಡರ್ ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು. ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲ ತಿಳಿಸಿದೆ.

ಘಟನೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments