ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ
ಹೈದ್ರಾಬಾದ್: ಕರ್ನಾಟಕ ಲೋಕಾಯುಕ್ತದಲ್ಲಿದ್ದಾಗ ಖಡಕ್ ಐಪಿಎಸ್ ಅಧಿಕಾರಿ ಎಂದೇ ಹೆಸರಾಗಿದ್ದ ಹೈದರಾಬಾದ್ನ ನ್ಯಾಷನಲ್ ಪೊಲೀಸ್ ಅಕಾಡೆಮಿಯಲ್ಲಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಧುಕರ್ ಶೆಟ್ಟಿ ಅವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ಕಳೆದ ಒಂದು ವಾರದಿಂದಲೂ ಹೈದರಾಬಾದಿನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು H1N1 ಸೋಂಕಿನಿಂದ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಶ್ವಾಸಕೋಶ ಹಾಗೂ ಜೀರ್ಣಾಂಗ ಸಮಸ್ಯೆಯಿಂದಲೂ ಬಳಲುತ್ತಿದ್ದ ಅವರು, 1999ರ ಬ್ಯಾಚ್ನ IPS ಅಧಿಕಾರಿಯಾಗಿದ್ದರು. ಮೂಲತಃ ಉಡುಪಿ ಜಿಲ್ಲೆಯವರು.
2011ರಲ್ಲಿ ವಿದ್ಯಾಭ್ಯಾಸದ ರಜೆ ಮೇಲೆ ಅಮೆರಿಕಕ್ಕೆ ತೆರಳಿದ್ದ ಅವರು ರಜೆಯಿಂದ ವಾಪಸ್ ಬಂದ ಬಳಿಕ ಡಿಐಜಿ ಆಗಿ ಭಡ್ತಿ ಪಡೆದಿದ್ದರು. ತರಬೇತಿ ಮತ್ತು ನೇಮಕಾತಿ ವಿಭಾಗದ ಡಿಐಜಿ ಆಗಿದ್ದರು. ಬಳಿಕ ಕೇಂದ್ರ ಸೇವೆಗೆ ನಿಯೋಜಿತರಾಗಿ ಹೈದರಾಬಾದಿನ ನ್ಯಾಷನಲ್ ಪೋಲೀಸ್ ಅಕಾಡೆಮಿ(ಎನ್ಪಿಎ)ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.