ಹೆಬ್ರಿ: ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ

Spread the love

ಹೆಬ್ರಿ: ಪೊಲೀಸ್ ಎನ್ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂಗೌಡ ಬಲಿ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹೆಬ್ರಿ ಪರಿಸರದಲ್ಲಿ ಕಳೆದ ಕೆಲದಿನಗಳಿಂದ ನಕ್ಸಲ್ ಓಡಾಟ ವರದಿಯಾಗಿದ್ದು, ಎಎನ್ ಎಫ್ ತೀವ್ರ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ಸೋಮವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ 5 ಮಂದಿ ನಕ್ಸಲರ ತಂಡ ಪೀತ ಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ಪೊಲೀಸರ ಗುಂಡೇಟಿಗೆ ವಿಕ್ರಂ ಗೌಡ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ .

ಉಳಿದ ನಾಲ್ವರು ಕಾಡಿನ ಹಾದಿಯಲ್ಲಿ ಪರಾರಿಯಾಗಿದ್ದಾರೆ. ಎಎನ್ ಎಫ್ ಕೂಂಬಿಂಗ್ ಮುಂದುವರಿಸಿದ್ದು, ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದೆಎಂದು ಎಎನ್ಎಫ್ ಮೂಲಗಳು ತಿಳಿಸಿವೆ.


Spread the love