ಹೋಟೆಲ್, ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಸಿಬಂದಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲು ಜಿಲ್ಲಾಧಿಕಾರಿ ಜಗದೀಶ್ ಆದೇಶ

Spread the love

ಹೋಟೆಲ್, ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಸಿಬಂದಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲು ಜಿಲ್ಲಾಧಿಕಾರಿ ಜಗದೀಶ್ ಆದೇಶ

ಉಡುಪಿ: ದಿನದಿಂದ ದಿನಕ್ಕೆ ಕೋವಿಡ್ -19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ , ಜಿಲ್ಲೆಯಲ್ಲಿರುವ ಮಾಲ್ ಗಳು, ಶಾಪಿಂಗ್ ಕಾಂಪ್ಲೆಕ್ಸ್ ಗಳು, ಅಂಗಡಿ ಮುಂಗಟ್ಟುಗಳು, Zomato, Swiggy ಯಂತಹ ಆಹಾರ ವಿತರಕ ಸಂಸ್ಥೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮಾಲಿಕರು ತಮ್ಮ ಸಂಸ್ಥೆಯ ಸಿಬಂದಿಗಳಿಗೆ ಕಡ್ಡಾಯವಾಗಿ ಕೋವಿಡ್ -19 ಪರೀಕ್ಷೆ ಮಾಡಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ನೀಡಿದ್ದಾರೆ

ಇತ್ತೀಚಿನ ದಿನಗಳಲ್ಲಿ ಕೋವಿಡ್ 19 ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ದೃಢಪಟ್ಟ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಉಲ್ಲೇಖಿತ ಸರ್ಕಾರಿ ಆದೇಶ (1)ರತೆ ಸಮುದಾಯದಲ್ಲಿ ಸರ್ವೇಕ್ಷಣ ಕಾರ್ಯವನ್ನು ಚುರುಕುಗೊಳಿಸಬೇಕಾಗಿದ್ದು, ಕೋವಿಡ್ 19 ಪರೀಕ್ಷೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಬೇಕಾಗಿರುತ್ತದೆ.

ಈ ನಿಟ್ಟಿನಲ್ಲಿ ಸಮುದಾಯದ ಕೆಲವು ನಿರ್ದಿಷ್ಟ ವರ್ಗಗಳನ್ನು ಆದ್ಯತೆಯ ಮೇರೆಗೆ ಆಯ್ಕೆ ಮಾಡಿಕೊಂಡು ಯಾದೃಚ್ಛಿಕವಾಗಿ (Random) ತಪಾಸಣೆಗೆ ಒಳಪಡಿಸಿ ಸ್ವಾಬ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಬೇಕಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005 (Disastet Management Act -2005) ಹಾಗೂ COVID ರೆಗ್ಯೂಲೇಶನ್ 2020 ಅಧಿಸೂಚನೆಯನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಯಾದ ಜಿ. ಜಗದೀಶ, ಭಾ.ಆ.ಸೇ, ಆದೇಶ ನೀಡಿದ್ದು, ಜಿಲ್ಲೆಯಲ್ಲಿರುವ ಮಾಲ್ ಗಳು, ಶಾಪಿಂಗ್ ಕಾಂಪ್ಲೆಕ್ಸ್ ಗಳು, ಅಂಗಡಿ ಮುಂಗಟ್ಟುಗಳು, Zomato, Swiggy ಯಂತಹ ಆಹಾರ ವಿತರಕ ಸಂಸ್ಥೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳವರು ತಮ್ಮ ವ್ಯಾಪ್ತಿಗೆ ಸೇರಿದ ತಾಲೂಕು ಆರೋಗ್ಯಾಧಿಕಾರಿ ಅವರನ್ನು ಸಂಪರ್ಕಿಸಿ ದಿನಾಂಕವನ್ನು ನಿಗದಿಪಡಿಸಿಕೊಂಡು ತಮಗೆ ಹತ್ತಿರವಿರುವ Fever Clinic ನಲ್ಲಿ ತಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಯವರಿಗೆ ತಪಾಸಣೆ ಮಾಡುವುದು.

ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸ್ಥಿರ ದೂರವಾಣಿ ಸಂಖ್ಯೆ:
ತಾಲೂಕು ಆರೋಗ್ಯಾಧಿಕಾರಿ ಕುಂದಾಪುರ – 08254230730
ತಾಲೂಕು ಆರೋಗ್ಯಾಧಿಕಾರಿ ಉಡುಪಿ – : 08202526428
ತಾಲೂಕು ಆರೋಗ್ಯಾಧಿಕಾರಿ ಕಾರ್ಕಳ : 08258231788

ಈ ಆದೇಶವನ್ನು ಉಲ್ಲಂಘಿಸಿ ದಲ್ಲಿ ಅಂತಹ ಸಂಸ್ಥೆಯವರು ಅಪರಾಧಿ ಎಂದು ಪರಿಗಣಿಸಿ ಕಾಯ್ದೆಯನ್ವಯ ಕಠಿಣ ಶಿಕ್ಷೆಗೆ ಗುರಿ ಪಡಿಸಬಹುದಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.


Spread the love